Top

'ಖಾನ್ ಕುಟುಂಬದ ಮೇಲೆ ಲಾಂಗು ಮಚ್ಚುಗಳಿಂದ ಹಲ್ಲೆ'


Asianet News Sunday 04 September 2016 02:14 pm IST Karnataka
'ಖಾನ್ ಕುಟುಂಬದ ಮೇಲೆ ಲಾಂಗು ಮಚ್ಚುಗಳಿಂದ ಹಲ್ಲೆ'
04 Sep

ಬೆಂಗಳೂರು(ಸೆ.04): ಗಾಡಿಗೆ ಡಿಕ್ಕಿ ಹೊಡೆದಿದ್ದನ್ನು ಪ್ರಶ್ನಿದಕ್ಕೆ ಕೋಪಗೊಂಡ ರೌಡಿಗಳ ಗುಂಪೊಂದು ಮನೆಗೆ ನುಗ್ಗಿ ಮನೆಯಲ್ಲಿದ್ದವರ ಮೇಲೆ ಲಾಂಗು ಮಚ್ಚುಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಚಂದ್ರಾ ಲೇಔಟ್ ನ ಗಂಗಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಏರ್ ಪೊರ್ಟ್ ನಲ್ಲಿ ಕೆಲಸ ಮಾಡುತ್ತಿರುವ ಶಾರುಖ್ ಖಾನ್ ಎಂಬುವರು ತಮ್ಮ ಗಾಡಿಗೆ ಡಿಕ್ಕಿ ಹೊಡೆದ ರೌಡಿಗಳನ್ನು ಪ್ರಶ್ನಿಸಿದ್ದಾರೆ.

ಈ ವೇಳೆ ಕೋಪಗೊಂಡ ರೌಡಿಗಳು ಶಾರುಖ್ ಖಾನ್ ಮನೆಗೆ ನುಗ್ಗಿ ಅವರ ಮತ್ತು ಕುಟುಂಬದ ಮೇಲೆ ಪೊಲೀಸರ ಸಮುಖದಲ್ಲೆ ಹಲ್ಲೆ ನಡೆಸಿದ್ದಾರೆ. ಬಿಡಿಸಲು ಹೊದ ಪೊಲೀಸರ ಮೇಲೆಯೂ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.

ಈ ಕುರಿತು ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ದುಷ್ಕರ್ಮಿಗಳ ಬಂದನಕ್ಕೆ ಬಲೆ ಬೀಸಿದ್ದಾರೆ.

 



Follow us on Google Plus

Follow us on Facebook and twitter

Subscribe our youtube channel

Get Latest News in your e-mail Inbox!