img

Navigation

Crime

ಮಾಜಿ ಸೈನಿಕನಿಂದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

Suvarnanews: 1 year ago
ಮಾಜಿ ಸೈನಿಕನಿಂದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಂಗಳೂರು(ಸೆ.8): ಆಪಲ್​​ ಕೊಡಿಸುತ್ತೇನೆಂದು 7 ವರ್ಷದ ಬಾಲಕಿಯೊಬ್ಬಳ ಮೇಲೆ ಮಾಜಿ ಸೈನಿಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಆರ್​ ಟಿ ನಗರದ ದಿಣ್ಣೂರು ರಸ್ತೆಯ ಅಪಾರ್ಟ್ ಮೆಂಟ್ ಒಂದರಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಕಾಮುಕನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಈ ಕುರಿತಂತೆ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.