img

Navigation

Crime

ಕಚೇರಿಯಲ್ಲೇ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಯತ್ನ

Suvarnanews: 1 year ago
ಕಚೇರಿಯಲ್ಲೇ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಯತ್ನ

ತುಮಕೂರು(ಸೆ.8): ಹಿರಿಯ ಅಧಿಕಾರಿಯ ಕಿರುಕುಳದಿಂದ ಬೇಸತ್ತ ಮಹಿಳಾ ಅಧಿಕಾರಿಯೊಬ್ಬರು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರಿನ ಸಮಾಜ ಕಲ್ಯಾಣ ಇಲಾಳೆಯ ಕಚೇರಿಯಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ. ಶಮೀಮ್ ಉನ್ನೀಸಾ ಆತ್ಮಹತ್ಯೆಗೆ ಯತ್ನಿಸಿದ ತುಮಕೂರು ತಾಲೂಕು ಸಮಾಜ ಕಲ್ಯಾಣಾಧಿಕಾರಿ. ಜಂಟಿ ನಿರ್ದೇಶಕ ಸುಬ್ರಹ್ಮಣ್ಯ ಅವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನಿನ್ನೆ ಮಧ್ಯಾಹ್ನ ಕರವಸ್ತ್ರದಿಂದ ಕುತ್ತಿಗೆಗೆ ಬಿಗಿದುಕೊಂಡು ಶಮೀಮ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಕಚೇರಿ ಸಿಬ್ಬಂದಿ ಆತ್ಮಹತ್ಯೆ ಯತ್ನವನ್ನು ತಡೆದಿದ್ದಾರೆ. ಕಿರುಕುಳದ ಬಗ್ಗೆ ಆಮೀಮ್ ಅವರು ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಗೆ ದೂರು ನೀಡಿದ್ದಾರೆ.