Top

ಜಿಎಸ್'ಟಿಗೆ ರಾಷ್ಚ್ರಪತಿ ಪ್ರಣಬ್ ಮುಖರ್ಜಿ ಅಂಕಿತ


Asianet News Thursday 08 September 2016 10:22 pm IST India
ಜಿಎಸ್'ಟಿಗೆ ರಾಷ್ಚ್ರಪತಿ ಪ್ರಣಬ್ ಮುಖರ್ಜಿ ಅಂಕಿತ
08 Sep

ನವದೆಹಲಿ (ಸೆ.08): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ ಹಾಕಿದ್ದಾರೆ.

ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದ ಮಹತ್ವದ ಜಿಎಸ್ ಟಿ ಮಸೂದೆಯನ್ನು ರಾಷ್ಟ್ರಪತಿಗಳ ಸಹಿಗಾಗಿ ಕಳುಹಿಸಲಾಗಿತ್ತು. ಈ ವಿಧೇಯಕಕ್ಕೆ ಈಗಾಗಲೇ 16 ರಾಜ್ಯಗಳು ಒಪ್ಪಿಗೆ ನೀಡಿದ್ದರಿಂದ ಶೇ.50 ರಷ್ಟು ರಾಜ್ಯಗಳ ಒಪ್ಪಿಗೆ ಸಿಕ್ಕಂತಾಗಿತ್ತು.

ಹೀಗಾಗಿ ರಾಷ್ಟ್ರಪತಿಗಳು ಇಂದು ತಮ್ಮ ಅಂಕಿತ ಹಾಕಿದ್ದಾರೆ. ಕೇಂದ್ರ ಸರ್ಕಾರ ಈ ಜಿಎಸ್ ಟಿಯನ್ನು 2017ರ ಏಪ್ರಿಲ್ 1ರಿಂದ ಜಾರಿಗೊಳಿಸಲು ಚಿಂತಿಸುತ್ತಿದ್ದು, ಕಳೆದ ಆಗಸ್ಟ್ 8ರಂದು ಈ ವಿಧೇಯಕ ಸಂಸತ್ತಿನಲ್ಲಿ ಅಂಗೀಕಾರಗೊಂಡಿತ್ತು.

ಬಳಿಕ 16 ರಾಜ್ಯಗಳು ಇದಕ್ಕೆ ಅನುಮೋದಿಸಿದ್ದವು. ಇದು ಸಾಂವಿಧಾನಿಕ ತಿದ್ದುಪಡಿಯಾಗಿದ್ದರಿಂದ ಶೇ.50ರಷ್ಟು ರಾಜ್ಯಗಳ ಅನುಮೋದನೆಯ ಅಗತ್ಯ ಇತ್ತು.

Tags:


Follow us on Google Plus

Follow us on Facebook and twitter

Subscribe our youtube channel

Get Latest News in your e-mail Inbox!